ಕುಡತಿನಿ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕುಡತಿನಿ, 25 ಜೂನ್ (ಹಿ.ಸ.) : ಆ್ಯಂಕರ್ : ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತ
ಕುಡತಿನಿ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಕುಡತಿನಿ, 25 ಜೂನ್ (ಹಿ.ಸ.) :

ಆ್ಯಂಕರ್ : ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ವರ್ಗ, ಸ್ವಚ್ಚತಾ ಕಾರ್ಮಿಕರು, ಪಿಎಂ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪ್ಯಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ವೆಬ್‌ಸೈಟ್ URL:https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನ.

ಬೇಕಾದ ದಾಖಲೆ:

ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿರುವಂತೆ) ಮತ್ತು ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು. ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಭಂದಿಸಿದ ದಾಖಲೆಗಳು (ಹಕ್ಕು ಪತ್ರ, ಕ್ರಯ ಪತ, ದಾನ ಪತ್ರ, ಉಡುಗೋರೆ ಪತ್ರ, ಖಾತಾ ನಕಲು ಫಾರಂ-3).

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆಯಲ್ಲಿ ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ).

ಅವಧಿ ಮೀರಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಯ ಶಾಖೆಯ ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande