ರಾಯಚೂರು, 25 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಮಸ್ಕಿ ಪುರಸಭೆಯಿಂದ 2025-26ನೇ ಸಾಲಿನ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಅವಾಸ್ (ನಗರ) 2.0 ಯೋಜನೆಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು ಎಸ್‍ಸಿ,ಎಸ್.ಟಿ /ಹಿಂದುಳಿದ/ ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿ.ಎಮ್ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು ವಲಸೆ ಬಂದ ಕುಟುಂಬದವರು ಆಧಾರ್ ಕಾರ್ಡ್, ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ನಿಗದಿತ ನಮೂನೆ ಅರ್ಜಿ, ಮೊಬೈಲ್ ಸಂಖ್ಯೆ ಹಾಗೂ ಪ್ಯಾನ್ ಕಾರ್ಡನೊಂದಿಗೆ ಅರ್ಜಿಯನ್ನು ಇಲಾಖೆ ವಿಳಾಸ: URL https://pmay-urban.gov.in ನಲ್ಲಿ ಜುಲೈ 15 ರೊಳಗಾಗಿ ಸಲ್ಲಿಸಿ, ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಶಾಖೆಯ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸುವಂತೆ ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್