ಸಿರುಗುಪ್ಪ, 25 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ವಸತಿ ಇಲಾಖೆಯಲ್ಲಿ 2130 ಕೋಟಿ ರೂಪಾಯಿ ಹಗರಣವಾಗಿದ್ದು ಸಚಿವ ಜಮೀರ್ ಅಹ್ಮದ್ ಅವರು ತಕ್ಷಣ ರಾಜೀನಾಮೆ ನೀಡಿ, ತನಿಖೆಗೆ ಸಹಕಾರ ನೀಡಬೇಕು ಎಂದು ಸಿರುಗುಪ್ಪ ತಾಲೂಕು ಬಿಜೆಪಿ ತಾಲೂಕು ಪಂಚಾಯಿತಿ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿತು.
ಸಿರುಗುಪ್ಪ ಮಂಡಲ ಅಧ್ಯಕ್ಷ ಕುಂಟನ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ, ರಾಜ್ಯ ಮಹಿಳಾ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಾಳಿ ಶಂಕ್ರಪ್ಪ, ಮುಖಂಡರಾದ ದರಪ್ಪ ನಾಯಕ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್