ಜೂನ್ 28ರವರೆಗೆ ವಿಶೇಷ ಲಸಿಕಾ ಅಭಿಯಾನ
ರಾಯಚೂರು, 25 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜೂನ್ 28 ರವರೆಗೆ ವಿಶೇಷ ಲಸಿಕಾ ಅಭಿಯಾನ ನಡೆಯಲಿದ್ದು, ಪ್ರತಿ ಮಂಗಳವಾರ ಮತ್ತು ಗುರುವಾರ ಲಸಿಕಾ ಕಾರ್ಯಕ್ರಮ ಜರುಗುತ್ತಿದೆ. ವಿಶೇಷ ಲಸಿಕಾ ಸಪ್ತಾಹ ಕಾರ್ಯಕ್ರಮದಲ್ಲಿ ಮಕ್ಕಳನ್ನು ಕಾಡುವ 12 ಮಾರಕ ರೋಗಗ
ಜೂನ್ 28ರವರೆಗೆ ವಿಶೇಷ ಲಸಿಕಾ ಅಭಿಯಾನ


ರಾಯಚೂರು, 25 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜೂನ್ 28 ರವರೆಗೆ ವಿಶೇಷ ಲಸಿಕಾ ಅಭಿಯಾನ ನಡೆಯಲಿದ್ದು, ಪ್ರತಿ ಮಂಗಳವಾರ ಮತ್ತು ಗುರುವಾರ ಲಸಿಕಾ ಕಾರ್ಯಕ್ರಮ ಜರುಗುತ್ತಿದೆ. ವಿಶೇಷ ಲಸಿಕಾ ಸಪ್ತಾಹ ಕಾರ್ಯಕ್ರಮದಲ್ಲಿ ಮಕ್ಕಳನ್ನು ಕಾಡುವ 12 ಮಾರಕ ರೋಗಗಳ ನಿಯಂತ್ರಣದ ಲಸಿಕೆಗಳನ್ನು ಹಾಕಲಾಗುತ್ತದೆ.

ಲಸಿಕೆ ಪಡೆಯದೇ ಇರುವ ಹಾಗೂ ಬಿಟ್ಟು ಹೋದ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಇಲ್ಲದ ದೊಡ್ಡಿ, ತಾಂಡಾ ಹಾಗೂ ನಗರದ ಕೊಳೆಗೇರಿ ಪ್ರದೇಶಗಳಲ್ಲಿ ಅಚ್ಚುಕಟ್ಟಾಗಿ ಲಸಿಕೆ ಹಾಕಲಾಗುವುದು. ಪೆಂಟಾದ ಮೊದಲನೇ ಡೋಸ್ ಪಡೆಯದೇ ಇರುವ ಮಕ್ಕಳಿಗೆ ಮತ್ತು ಎಂ.ಆರ್-1 ಹಾಗೂ 2ರ ಲಸಿಕೆ ವಂಚಿತ ಮಕ್ಕಳಿಗೆ ವಿಶೇಷ ಲಸಿಕಾ ಅಭಿಯಾನ ನಡೆಸಲಾಗುತ್ತದೆ.

ಜಿಲ್ಲೆಯಾದ್ಯಂತ ಎಲ್ಲಾ ನಗರ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿರುವ ಲಸಿಕಾ ವಂಚಿತ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆದುಕೊಂಡು ಬಂದು ಲಸಿಕೆ ಹಾಕಿಸುವುದರ ಮೂಲಕ ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande