ಗ್ರಾಮ ಆಡಳಿತಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಕೊಪ್ಪಳ, 25 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಕಂದಾಯ ಘಟಕದ ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟ್‍ರ್ ಕಮ್ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನ
ಗ್ರಾಮ ಆಡಳಿತಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ


ಕೊಪ್ಪಳ, 25 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಕಂದಾಯ ಘಟಕದ ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟ್‍ರ್ ಕಮ್ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‍ಸೈಟ್www.koppal.nic.in ರಲ್ಲಿ ಪ್ರಕಟಿಸಲಾಗಿದೆ. ಪಟ್ಟಿ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಮರ್ಥನೀಯ ದಾಖಲಾತಿಗಳೊಂದಿಗೆ ಜೂನ್ 30 ರೊಳಗಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಲಿಖಿತವಾಗಿ ಸಲ್ಲಿಸಲು ಸೂಚಿಸಿದೆ.

ನಿಗದಿತ ಅವಧಿ ಮುಗಿದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‍ಸೈಟ್‍ನಲ್ಲಿ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande