ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ : ಡಾ. ಶರಣ್‌ ಪ್ರಕಾಶ್‌ ಪಾಟೀಲ್‌
ಬೆಂಗಳೂರು, 25 ಜೂನ್ (ಹಿ.ಸ.) : ಆ್ಯಂಕರ್ : ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇದು ನರೇಂದ್ರ ಮೋದಿ ರೀತಿಯ ಸರ್ವಾಧಿಕಾರ ಆಡಳಿತ ಅಲ್ಲ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃ
Patil


ಬೆಂಗಳೂರು, 25 ಜೂನ್ (ಹಿ.ಸ.) :

ಆ್ಯಂಕರ್ : ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇದು ನರೇಂದ್ರ ಮೋದಿ ರೀತಿಯ ಸರ್ವಾಧಿಕಾರ ಆಡಳಿತ ಅಲ್ಲ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

ಶಾಸಕರು ಈಗ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರನ್ನು ಕೆಲವು ವಿಷಯದ ಬಗ್ಗೆ ಪ್ರಶ್ನಿಸಿದ್ದಾರೆ. ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಇದರಲ್ಲಿ ತಪ್ಪೇನು? ಎಂದಿದ್ದಾರೆ.

ಮನೆಯ ಯಜನಮಾನನ ಮುಂದೆ ಅಳಲು ತೋಡಿಕೊಳ್ಳುವುದು ತಪ್ಪಾ? ಪ್ರಜಾಪ್ರಭುತ್ವದಲ್ಲಿ ಇದೆಲ್ಲ ಸಹಜ. ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ಇದು ಅಸಮಾಧಾನ ಅಥವಾ ಆಕ್ರೋಶ ಅಲ್ಲ, ತಮ್ಮ ಬೇಡಿಕೆ ಮಂಡಿಸಿದ್ದು. ಒಬ್ಬೊಬ್ಬರು ಒಂದೊಂದು ರೀತಿ ತಮ್ಮ ಅಹವಾಲು ಪ್ರಸ್ತುತಪಡಿಸಬಹುದು ಎಂದರು.

ನಮ್ಮ ಸರ್ಕಾರದಲ್ಲಿ ಹಣದ ಕೊರೆತೆ ಇಲ್ಲ. ಬಿಜೆಪಿಯವರು ಸುಮ್ಮನೇ ಬೊಬ್ಬೆ ಹೊಡೆಯುತ್ತಿದ್ದಾರೆ. ಹಣ ಇಲ್ಲಾ ಅಂದ್ರೆ ಇಷ್ಟೊಂದು ಅಭಿವೃದ್ಧಿ ಮಾಡೋಕೆ ಆಗುತ್ತಾ. ನಮ್ಮ ಭಾಗದ ಕಡೆ ಬನ್ನಿ ಅಭಿವೃದ್ಧಿ ಹಣ ಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕರಾದವರಿಗೆ ಹೆಚ್ಚು ಕೆಲಸ ಮಾಡಬೇಕು ಅನಿಸುತ್ತೆ. ಮೊದಲ ಬಾರಿ ಶಾಸಕರಾದವರಿಗೆ ಇನ್ನೂ ಕೆಲಸ ಮಾಡಬೇಕು ಎಂಬ ಹಂಬಲ ಇರುತ್ತದೆ. ನಾನು ಮೊದಲ ಬಾರಿ ಶಾಸಕನಾದಗಲೂ ಇದೇ ಅನಿಸುತ್ತಿತ್ತು. ಶಾಸಕರ ಬೇಡಿಕೆ ಬಗ್ಗೆ ನಮ್ಮ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಗಮನಹರಿಸುತ್ತಾರೆ ಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande