9 ಎಂಬಿಬಿಎಸ್ ವೈದ್ಯಾಧಿಕಾರಿಗಳ ಹುದ್ದೆ : ಜೂನ್ 30ರಂದು ನೇರ ಸಂದರ್ಶನ
ರಾಯಚೂರು, 26 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ 2025-26 ನೇ ಸಾಲಿಗೆ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜೂನ್ 30ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು
9 ಎಂಬಿಬಿಎಸ್ ವೈದ್ಯಾಧಿಕಾರಿಗಳ ಹುದ್ದೆ : ಜೂನ್ 30ರಂದು ನೇರ ಸಂದರ್ಶನ


ರಾಯಚೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ 2025-26 ನೇ ಸಾಲಿಗೆ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜೂನ್ 30ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ನಮ್ಮ ಕ್ಲಿನಿಕ್ ನಲ್ಲಿ 08 ಹುದ್ದೆಗಳು ಹಾಗೂ ಎನ್.ಯು.ಹೆಚ್.ಎಂ 01 ಹುದ್ದೆ ಸೇರಿದಂತೆ ಒಟ್ಟು 9 ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ಮೇರಿಟ್ ಕಮ್ ರೋಷ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜೂನ್ 30ರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ.

ಈ ಗುತ್ತಿಗೆ ಆಧಾರದ ನೇಮಕಾತಿಯು ಎನ್.ಹೆಚ್.ಎಂ. ಹಾಗೂ ಎನ್.ಯು.ಹೆಚ್.ಎಂ. ನಿಯಮಾವಳಿಯ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ. ಅಲ್ಲದೆ ಹುದ್ದೆಗಳು ಖಾಲಿ ಇದ್ದಲ್ಲಿ ಪ್ರತಿ ಸೋಮವಾರ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯದ ಜಿಲ್ಲಾ ಯೋಜನಾ ನಿರ್ವಹಣಾ ಘಟಕ ಅಧಿಕಾರಿಗಳ ಮೊಬೈಲ್ ಸಂಖ್ಯೆ : 9449843121ಗೆ ಕಚೇರಿಯ ಅವಧಿಯಲ್ಲಿ ಸಂಕರ್ಪ ಮಾಡಬಹುದಾಗಿದೆ. ಅಥವಾ ಕಚೇರಿಯ ಸೂಚನಾ ಫಲಕವನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande