ಛತ್ತೀಸ್‌ಗಢ ಎನ್‌ಕೌಂಟರ್ ; ಇಬ್ಬರು ಮಹಿಳಾ ನಕ್ಸಲರ ಹತ್ಯೆ
ನಾರಾಯಣಪುರ, 26 ಜೂನ್ (ಹಿ.ಸ.) : ಆ್ಯಂಕರ್ : ಛತ್ತಿಸಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತ್ಯೆಯಾಗಿದ್ದಾರೆ. ಬೃಹತ್ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಬಲಿಯ
Naxal


ನಾರಾಯಣಪುರ, 26 ಜೂನ್ (ಹಿ.ಸ.) :

ಆ್ಯಂಕರ್ : ಛತ್ತಿಸಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತ್ಯೆಯಾಗಿದ್ದಾರೆ.

ಬೃಹತ್ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಬಲಿಯಾಗಿದ್ದಾರೆ, ಮೃತದೇಹಗಳೊಂದಿಗೆ ಒಂದು ಐಎನ್ಎಸ್ಎಎಸ್ ರೈಫಲ್, .315 ಬೋರ್ ಆಯುಧ ಹಾಗೂ ವೈದ್ಯಕೀಯ ಕಿಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಮೂಲಗಳ ಪ್ರಕಾರ, ನಕ್ಸಲ್ ಪ್ರಭಾವಿತ ಮಾಡ್ ವಿಭಾಗದಲ್ಲಿ ನಕ್ಸಲರ ಚಟುವಟಿಕೆಗಳ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದರಿಂದ ನಾರಾಯಣಪುರ, ಕೊಂಡಗಾಂವ್ ಡಿಆರ್‌ಜಿ ಹಾಗೂ ಎಸ್‌ಟಿಎಫ್ ತಂಡಗಳು ಬುಧವಾರ ಸಂಜೆಯಿಂದ ಕಾರ್ಯಾಚರಣೆ ಆರಂಭಿಸಿದ್ದವು.

ಗುರುವಾರ ಬೆಳಿಗ್ಗೆಯವರೆಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ. ಮೃತ ಮಹಿಳಾ ನಕ್ಸಲರ ಗುರುತು ಇನ್ನು ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande