ಬೆಳಗಾವಿ, 26 ಜೂನ್ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ ಮತ್ತು ಕಿತ್ತೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದೂ ರಜೆ ಘೋಷಿಸಲಾಗಿದೆ.
ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹಾಗಾಗಿ, ಬುಧವಾರ ಎರಡು ತಾಲೂಕಿನ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಆರ್ಭಟ ಜೋರಾಗಿದ್ದರಿಂದ ಜಿಲ್ಲೆಯ ಮೂರು ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa