ಕೊಡಗು ಸೇರಿದಂತೆ ಹಲವೆಡೆ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಮಳೆ ಪ್ರಮಾಣ ಹೆಚ್ಚಾಗಿದ್ದು, ಕೊಡಗು ಜಿಲ್ಲೆಗೆ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆ
ಕೊಡಗು ಸೇರಿದಂತೆ ಹಲವೆಡೆ ಭಾರಿ ಮಳೆಯ ಮುನ್ಸೂಚನೆ


ಬೆಂಗಳೂರು, 26 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಮಳೆ ಪ್ರಮಾಣ ಹೆಚ್ಚಾಗಿದ್ದು, ಕೊಡಗು ಜಿಲ್ಲೆಗೆ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ. ಇದರೊಂದಿಗೆ ಧಾರವಾಡ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande