ಕಾರವಾರ, 26 ಜೂನ್ (ಹಿ.ಸ.) :
ಆ್ಯಂಕರ್ : ಕಾರವಾರ ಜಿಲ್ಲೆಯ ಜಿಲ್ಲೆಯ ಘಟ್ಟದ ಪ್ರದೇಶದ ಮೇಲ್ಭಾಗದ ತಾಲೂಕುಗಳಲ್ಲಿ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದೂ ರಜೆ ನೀಡಲಾಗಿದೆ.
ಜಿಲ್ಲೆಯಲ್ಲಿ ಜೂ.27ರವರೆಗೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa