ರಾಯಚೂರು, 26 ಜೂನ್ (ಹಿ.ಸ.) :
ಆ್ಯಂಕರ್ : ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೆÇೀರ್ಟಲ್ ಮೂಲಕ http://ssp.karnataka.gov.in ಸೆಪ್ಟಂಬರ್ 30ರೊಳಗಾಗಿ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ ರಾಯಚೂರು ಮೊಬೈಲ್ ಸಂಖ್ಯೆ: 9731028420, ದೇವದುರ್ಗ 9148233616ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ಉಪ ವಿಭಾಗದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್