ಹಾವೇರಿ, 26 ಜೂನ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ್ ಕಾಲಿಗೆ ಗುಂಡು ಹಾರಿಸಲಾಗಿದೆ. ಆರೋಪಿಗಳನ್ನು ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗಳು ಗುತ್ತಿಗೆದಾರ ಶಿವಾನಂದ ಅವರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.
ನಾಲ್ಕು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿತ್ತು, ಹಾನಗಲ್ ತಾಲೂಕಿನ ಕೊಂಡೊಜಿ ಬಳಿ ಆರೋಪಿಗಳು ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಬಂಧಿಸಲು ತೆರಳಿದ್ದರು.
ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಕಾಲಿಗೆ ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಹಾಗೂ ಪಿಎಸ್ಐ ಸಂಪತ್ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa