ಬೆಳ್ತಂಗಡಿ, 26 ಜೂನ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಹರಿಯುವ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು. ನೇತ್ರಾವತಿ ನದಿ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿ ತಗ್ಗು ಪ್ರದೇಶಗಳ ಕೃಷಿ ಭೂಮಿಗೆ ನೀರು ನುಗ್ಗಿದೆ. ಶಿಶಿಲದ ಕಪಿಲ ನದಿ ಉಕ್ಕಿದ್ದು ಶ್ರೀ ಶಿಶಿಲೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.
ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ, ಮನೆಗಳಿಗೆ ಹಾನಿ ಸಂಭವಿಸಿದ ಘಟನೆಗಳೂ ನಡೆದಿವೆ. ಮುಂದಿನ ಎರಡು ದಿನಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa