ಡೆಹ್ರಾಡೂನ್, 26 ಜೂನ್ (ಹಿ.ಸ.) :
ಆ್ಯಂಕರ್ : ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್‌ನಲ್ಲಿ ಟೆಂಪೋ ಟ್ರಾವೆಲರ್ ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಬಿದ್ದು, ಇಬ್ಬರು ಮೃತಪಟ್ಟು, 10 ಮಂದಿ ನಾಪತ್ತೆಯಾಗಿದ್ದಾರೆ. 8 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬದರಿನಾಥ್ ಕಡೆಗೆ ತೆರಳುತ್ತಿದ್ದ ವಾಹನ ದುರಂತಕ್ಕೆ ಒಳಗಾಗಿದೆ. ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಪೊಲೀಸರು ಮತ್ತು ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿ, ಎಲ್ಲರ ಸುರಕ್ಷತೆಗೆ ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa