ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, 27 ಜೂನ್ (ಹಿ.ಸ.) : ಆ್ಯಂಕರ್ : ಹಿರೇಸಿಂದೋಗಿಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಖಾಲಿ ಇರುವ ಜೀವಶಾಸ್ತ್ರ ವಿಷಯದ ಬೋಧಕರ ಹುದ್ದೆಗೆ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಂ.ಎಸ್‍ಸಿ (Botany/Zoology), , ಬಿ.ಎ
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ, 27 ಜೂನ್ (ಹಿ.ಸ.) :

ಆ್ಯಂಕರ್ : ಹಿರೇಸಿಂದೋಗಿಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಖಾಲಿ ಇರುವ ಜೀವಶಾಸ್ತ್ರ ವಿಷಯದ ಬೋಧಕರ ಹುದ್ದೆಗೆ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಎಂ.ಎಸ್‍ಸಿ (Botany/Zoology), , ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳೊಂದಿಗೆ ಜುಲೈ 04 ರೊಳಗಾಗಿ ಉಪನಿರ್ದೇಶಕರ ಕಾರ್ಯಾಲಯ, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಇವರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ನಿಗದಿಪಡಿಸಿರುವ ವೇತನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಾಲೇಜು ಪ್ರಾಂಶುಪಾಲರು, ಮೊ.ಸಂ: 7411999371 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande