ಕೊಪ್ಪಳ, 27 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಜಿಲ್ಲಾಧಿಕಾರಿ ಕಛೇರಿಯ ಲೆಕ್ಕಪರಿಶೋಧಕ ಹರೀಶ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಜಿಲ್ಲಾಧಿಕಾರಿ ಕಛೇರಿಯ ಪ್ರಥಮ ದರ್ಜೆ ಸಹಾಯಕ ವಿಜಯ್ ಪುರಾಣಿಕ, ಸುನೀತಾ ಗಾಯಕ್ವಾಡ್, ರುಕ್ಮಾ ದೋತ್ರೆ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್