ನವದೆಹಲಿ, 27 ಜೂನ್ (ಹಿ.ಸ.) :
ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆ ಎದುರಾಗಲಿದೆ.
ಅಂಡಮಾನ್ ಮತ್ತು ನಿಕೋಬಾರ್, ಮಧ್ಯಪ್ರದೇಶ, ಛತ್ತೀಸ್ಗಢ, ಬಿಹಾರ, ಜಾರ್ಖಂಡ್, ಒಡಿಶಾ, ಗಂಗಾ ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮಿತಿಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 1 ರಂದು ಅರುಣಾಚಲ ಪ್ರದೇಶ ಹಾಗೂ ಜುಲೈ 2 ರಂದು ನಾಗಾಲ್ಯಾಂಡ್ನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಭಾರತದಲ್ಲಿ ಜೂನ್ 27-28ರಂದು ತಮಿಳುನಾಡು, ಜೂನ್ 27-ಜುಲೈ 3ರಲ್ಲಿ ಕರಾವಳಿ ಕರ್ನಾಟಕ, ಜೂನ್ 29-ಜುಲೈ 3ರಲ್ಲಿ ಕೇರಳ ಹಾಗೂ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚು ಇರುತ್ತದೆ.
ಅರೇಬಿಯನ್ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಬಲವಾದ ಗಾಳಿ ಮತ್ತು ಎತ್ತರದ ಅಲೆಗಳ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರಿಗೆ ಜೂನ್ 27ರಿಂದ ಜುಲೈ 2ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಗುಜರಾತ್, ಗೋವಾ, ಕರ್ನಾಟಕ, ಕೇರಳ, ಒಡಿಶಾ, ಪಶ್ಚಿಮ ಬಂಗಾಳ, ಲಕ್ಷದ್ವೀಪ ಮತ್ತು ಅಂಡಮಾನ್ ದ್ವೀಪಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೆ ತಡೆ ನೀಡಲಾಗಿದೆ.
ಮಾನ್ಸೂನ್ ದೇಶದ ಹೆಚ್ಚಿನ ಭಾಗಗಳಿಗೆ ಹರಡಲು ಸೂಕ್ತ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಾಯುವ್ಯ ಭಾರತ ಸೇರಿದಂತೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರಾಖಂಡ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ.
ಬಲವಾದ ಗಾಳಿ, ಮಳೆ ಹಾಗೂ ಪ್ರವಾಹದ ಮುನ್ಸೂಚನೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa