ಕೊಪ್ಪಳ, 27 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧ ಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್‍ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ 20 ರಿಂದ 50 ವರ್ಷದೊಳಗಿನ ರಾಜ್ಯದ ಯಾವುದೇ ಭಾಗದ ಆಸಕ್ತ ಅಭ್ಯರ್ಥಿಗಳು ಜುಲೈ 20 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್: https://sahithyaacademy.karnataka.gov.in ಗೆ ಭೇಟಿ ನೀಡಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್