ರುದ್ರಪ್ರಯಾಗ, 27 ಜೂನ್ (ಹಿ.ಸ.) :
ಆ್ಯಂಕರ್ : ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್ ನಡುವಿನ ಕೇದಾರನಾಥ ಯಾತ್ರಾ ಮಾರ್ಗದಲ್ಲಿ ನಿರಂತರ ಮಳೆಯಿಂದಾಗಿ ಮಣ್ಣು ಮತ್ತು ಕಲ್ಲು ಉರುಳಿ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.
ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಸೋನ್‌ಪ್ರಯಾಗ್ ಶಟಲ್ ಸೇತುವೆ ಮತ್ತು ಮುಂಕಟಿಯಾ ಬಳಿ ಅವಶೇಷ ಬೀಳುತ್ತಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯ ಆಡಳಿತ ರಸ್ತೆ ಮಾರ್ಗದಲ್ಲಿ ಬಿದ್ದ ಕಲ್ಲು ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.
ಪ್ರಯಾಣಿಕರ ಸುರಕ್ಷತೆಗಾಗಿ ಪೊಲೀಸರು ಸಂಚಾರ ನಿಯಂತ್ರಿಸುತ್ತಿದ್ದು, ಯಾತ್ರಾರ್ಥಿಗಳಿಗೆ ಹವಾಮಾನ ಮುನ್ಸೂಚನೆ ನೋಡಿ ಎಚ್ಚರಿಕೆಯಿಂದ ಪ್ರಯಾಣಿಸಬೇಕೆಂದು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa