ಮುಂಬಯಿ, 28 ಜೂನ್ (ಹಿ.ಸ.) :
ಆ್ಯಂಕರ್ : 'ಕಾಂತ ಲಗಾ ಗರ್ಲ್' ಎಂದೇ ಪ್ರಸಿದ್ಧರಾದ ಖ್ಯಾತ ನಟಿ ಶೆಫಾಲಿ ಜರಿವಾಲಾ (42) ಇಂದು ಅಕಾಲಿಕವಾಗಿ ನಿಧನರಾಗಿದ್ದಾರೆ.
ಬೆಳಗ್ಗೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಶೆಫಾಲಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರ ಪತಿ ನಟ ಪರಾಗ್ ತ್ಯಾಗಿ ಅವರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು, ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳಿಸಲಾಗಿದೆ. ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ.
ಶೆಫಾಲಿ, ‘ಕಾಂತ ಲಗಾ’ ಹಾಡಿನಿಂದ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದವರು. ನಂತರ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡು ಮತ್ತೊಮ್ಮೆ ಜನಪ್ರಿಯರಾದವರು. ಅವರ ಹಠಾತ್ ನಿಧನ ಚಿತ್ರರಂಗ ಮತ್ತು ಅಭಿಮಾನಿಗಳಿಗೆ ಭಾರಿ ಆಘಾತ ಉಂಟು ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa