ಹೊಸಪೇಟೆ, 28 ಜೂನ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನೂರಪ್ಪ ಅವರು ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ, ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಸಿಇಟಿ ಹಾಗೂ ಎನ್ಇಇಟಿ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ http://kacdc.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 31 ರಂದು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವವರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು, ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಮಾಡಲಾಗುವುದು. 2019-20 ನೇ ಸಾಲಿನಿಂದ 2021-22 ಸಾಲಿನವರೆಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮ ಸಹಾಯವಾಣಿ ಸಂಖ್ಯೆ 9448451111 ಗೆ ಕಚೇರಿ ಸಮಯದಲ್ಲಿ ಹಾಗೂ ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕ ಕಚೇರಿ ವಿಳಾಸಗಳನ್ನು ಸೇರಿದಂತೆ ಎಲ್ಲ ವಿವರಗಳನ್ನು ಆನ್ ಲೈನ್ ತಿಳಿಯಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್