ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ
ಬೆಳಗಾವಿ, 28 ಜೂನ್ (ಹಿ.ಸ.): ಆ್ಯಂಕರ್: ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹತ್ತರಗಿ ಗ್ರಾಮದಲ್ಲಿ ಅಂದಾಜು 75 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಸಚಿವ ಸತೀಶ್ ಜಾರಕಿಹೊಳಿ‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂದಾಜು 25 ಲಕ್ಷ
Inauguration


ಬೆಳಗಾವಿ, 28 ಜೂನ್ (ಹಿ.ಸ.):

ಆ್ಯಂಕರ್:

ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹತ್ತರಗಿ ಗ್ರಾಮದಲ್ಲಿ ಅಂದಾಜು 75 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಸಚಿವ ಸತೀಶ್ ಜಾರಕಿಹೊಳಿ‌ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅಂದಾಜು 25 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಲ್ಮೀಕಿ ಭವನ, 30 ಲಕ್ಷ ರೂಪಾಯಿ ವೆಚ್ಚದಲ್ಲಿ ಪರಮೇಶ್ವರ ದೇವಾಲಯದ ಜೀರ್ಣೋದ್ಧಾರ ಮತ್ತು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಹನುಮಾನ ಮಂದಿರದ ಅರ್ಚಕರ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande