ಬೆಂಗಳೂರು, 28 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ಮಳೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜಿಲ್ಲೆಗೆ ಕೆಂಪು ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa