ಹುಬ್ಬಳ್ಳಿ, 28 ಜೂನ್ (ಹಿ.ಸ.):
ಆ್ಯಂಕರ್:
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ, ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜುಲೈ 1 ರಂದು ಬೆಳಿಗ್ಗೆ 10.30 ಕ್ಕೆ ಬೆಂಗೇರಿಯ ಸಂತೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು . ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಅಧ್ಯಕ್ಷತೆ ವಹಿಸುವರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa