ಹಾವೇರಿ, 28 ಜೂನ್ (ಹಿ.ಸ.):
ಆ್ಯಂಕರ್:
ಹಾವೇರಿ ಜಿಲ್ಲೆಯ ರಾಣೆಬೆನ್ನೂರ ನಗರದ ಶ್ರೀ ನೀಲಕಂಠೇಶ್ವರ ಸಭಾಭವನದಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್, ರಾಣೆಬೆನ್ನೂರ ಏರ್ಪಡಿಸಿದ ತುರ್ತು ಪರಿಸ್ಥಿತಿ ಕರಾಳ ದಿನಗಳ ವಿರುದ್ಧ ನಡೆದಿರುವ ರೋಚಕ ಕಥೆ ಅನಾವರಣ* ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವೀರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕರಾದ ಅರುಣಕುಮಾರ ಪೂಜಾರ, ರಾಜ್ಯ ತುರ್ತು ಪರಿಸ್ಥಿತಿ ಸಮಿತಿಯ ಸಂಚಾಲಕರಾದ ಮಹೇಂದ್ರ ಕೌತಾಳ, ತುರ್ತು ಪರಿಸ್ಥಿತಿ ಸಂಧರ್ಭದಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸಿದ ರಾಮಕೃಷ್ಣ ತುಕಾರಾಮ ತಾಂಬೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa