ಐದು ಹುಲಿ ಸಾವು ಪ್ರಕರಣ ; ಮೂರು ಆರೋಪಿಗಳ ಬಂಧನ
ಚಾಮರಾಜನಗರ, 28 ಜೂನ್ (ಹಿ.ಸ.) : ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಬಂಧಿಸಿದೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ ಕೋನಪ್ಪ ಹಾಗೂ ಹಸುವಿನ
Arrest


ಚಾಮರಾಜನಗರ, 28 ಜೂನ್ (ಹಿ.ಸ.) :

ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಬಂಧಿಸಿದೆ.

ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ ಕೋನಪ್ಪ ಹಾಗೂ ಹಸುವಿನ ಮೃತದೇಹಕ್ಕೆ ವಿಷಪ್ರಾಶನ ಮಾಡಿದ ಆರೋಪದ ಮೇಲೆ ಮಾದುರಾಜ್ ಹಾಗೂ ನಾಗರಾಜು ಪೂಜಾರಿಗೌಡ ಎಂಬ ದನಗಾಹಿಗಳನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

ಮೀಣ್ಯಂ ಸಮೀಪವೇ ಕೊಪ್ಪ ಗ್ರಾಮವಿದೆ. ಜಾನುವಾರುಗಳಿಗೆ ಹುಲಿ ಉಪಟಳ ಕೊಡುತ್ತಿದೆ ಎಂಬ ಕೋಪಕ್ಕೆ ಹುಲಿ ಬೇಟೆಯಾಡಿದ್ದ ಹಸುವಿನ ದೇಹಕ್ಕೆ ಕ್ರಿಮಿನಾಶಕ ಸಿಂಪಡಿಸಿರುವುದಾಗಿ ಆರಂಭಿಕ ವಿಚಾರಣೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande