ಸಮಿತಿ ಸದಸ್ಯತ್ವಕ್ಕೆ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಧಾರವಾಡ, 29 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಅವಾಸ್ ಯೋಜನೆ (ನಗರ) 2.0 ಅಡಿಯಲ್ಲಿ ಧಾರವಾಡ ಜಿಲ್ಲಾ ಮಟ್ಟದ ಅನುಮೋದನೆ ಹಾಗೂ ಮೇಲ್ವಿಚಾರಣಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡುವ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಸಾಮಾ
ಸಮಿತಿ ಸದಸ್ಯತ್ವಕ್ಕೆ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ


ಧಾರವಾಡ, 29 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಅವಾಸ್ ಯೋಜನೆ (ನಗರ) 2.0 ಅಡಿಯಲ್ಲಿ ಧಾರವಾಡ ಜಿಲ್ಲಾ ಮಟ್ಟದ ಅನುಮೋದನೆ ಹಾಗೂ ಮೇಲ್ವಿಚಾರಣಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡುವ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿರುವ ಮತ್ತು ಉಚಿತವಾಗಿ ಸೇವೆ ನೀಡುವ ಆಸಕ್ತ ಸಂಸ್ಥೆಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿ ಸಂಸ್ಥೆಗಳು ಧಾರವಾಡ ಜಿಲ್ಲಾ ನಗರಾಭಿವೃದ್ಧಿ ಕೋಶದ ವೆಬ್‌ಸೈಟ್ http://www.dharwaddudc.mrc.gov.in ನಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಎಲ್ಲಾ ಅಗತ್ಯ ಮಾಹಿತಿಗಳನ್ನು ಪೂರೈಸಿ ಜುಲೈ 10, 2025ರೊಳಗಾಗಿ ಸಲ್ಲಿಸಬೇಕು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande