ಹಾಸನ, 29 ಜೂನ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ವೃತ್ತಿ ತರಬೇತಿಯ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿರುತ್ತದೆ. ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.inನಲ್ಲಿ ಅರ್ಜಿ ಮತ್ತು ಅಗತ್ಯ ದಾಖಲಾತಿಗಳನ್ನು ಸಲ್ಲಿಸುವಂತೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹಾಸನ ರವರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa