ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಕ್ಕೆ ಚುನಾವಣೆ
ಹುಬ್ಬಳ್ಳಿ, 29 ಜೂನ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 24 ನೇ ಅವಧಿಗೆ ಮಹಾಪೌರರ (ಸಾಮಾನ್ಯ ಮಹಿಳೆ) ಹಾಗೂ ಉಪ ಮಹಾಪೌರ (ಹಿಂದುಳಿದ ವರ್ಗ-ಬಿ) ರ ಸ್ಥಾನಗಳಿಗೆ ಅಭ್ಯರ್ಥಿಯನ್ನು ಚುನಾಯಿಸಲು ಜೂನ್ 30, 2025 ರಂದು ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ
ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಕ್ಕೆ ಚುನಾವಣೆ


ಹುಬ್ಬಳ್ಳಿ, 29 ಜೂನ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 24 ನೇ ಅವಧಿಗೆ ಮಹಾಪೌರರ (ಸಾಮಾನ್ಯ ಮಹಿಳೆ) ಹಾಗೂ ಉಪ ಮಹಾಪೌರ (ಹಿಂದುಳಿದ ವರ್ಗ-ಬಿ) ರ ಸ್ಥಾನಗಳಿಗೆ ಅಭ್ಯರ್ಥಿಯನ್ನು ಚುನಾಯಿಸಲು ಜೂನ್ 30, 2025 ರಂದು ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ.

ಜೂನ್ 30, 2025 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ನಂತರ ಮಧ್ಯಾಹ್ನ 1 ಗಂಟಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande