ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಧಾರವಾಡ, 29 ಜೂನ್ (ಹಿ.ಸ.) : ಆ್ಯಂಕರ್ : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ
ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ


ಧಾರವಾಡ, 29 ಜೂನ್ (ಹಿ.ಸ.) :

ಆ್ಯಂಕರ್ : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 10, 2025 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande