ಆಶೋಕ್ ಬಳಿ ಹೋಗಿ ಭವಿಷ್ಯ ಕೇಳುವೆ : ಡಿ.ಕೆ.ಶಿವಕುಮಾರ್
ಬೆಂಗಳೂರು, 29 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನ
ಆಶೋಕ್ ಬಳಿ ಹೋಗಿ ಭವಿಷ್ಯ ಕೇಳುವೆ : ಡಿ.ಕೆ.ಶಿವಕುಮಾರ್


ಬೆಂಗಳೂರು, 29 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಉಸ್ತುವಾರಿ ಸುರ್ಜೆವಾಲ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಶಾಸಕರನ್ನು ಭೇಟಿ ಮಾಡಲಿದ್ದು, ಶಾಸಕರ ಜೊತೆ ಖುದ್ದಾಗಿ ಚರ್ಚೆ ನಡೆಸಲಿದ್ದಾರೆ. ಈ ಕುರಿತು ನಾನು ಕೂಡ ಶಾಸಕರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande