ಹಾಸನ, 29 ಜೂನ್ (ಹಿ.ಸ.) :
ಆ್ಯಂಕರ್ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ 5 ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಯಡಿ ಅರಸೀಕೆರೆ (ಸಾಮಾನ್ಯ ವರ್ಗ-5), ಆಲೂರು (ಪರಿಶಿಷ್ಟ ಪಂಗಡ ವರ್ಗ-5), ಹಾಸನ (ಪರಿಶಿಷ್ಟ ಪಂಗಡ ವರ್ಗ-13) ಮತ್ತು ಹೊಳೆನರಸೀಪುರ (ಪರಿಶಿಷ್ಟ ಪಂಗಡ ವರ್ಗ-1) ತಾಲ್ಲೂಕುಗಳಲ್ಲಿ ಬಾಕಿ ಉಳಿದಿರುವ ಒಟ್ಟು 24 ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಹ ಆಸಕ್ತ ಗ್ರಾಮೀಣ ಮುಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸ್ವಸಹಾಯ ಸಂಘದ ಮಹಿಳಾ ಸದಸ್ಯರು/ರೈತ ಉತ್ಪಾದಕರ ಸಂಸ್ಥೆಯ ಮಹಿಳಾ ಸದಸ್ಯರು/ಕುಕ್ಕುಟ ಸಹಕಾರ ಸಂಘಗಳಲ್ಲಿರುವ ಮಹಿಳಾ ಸದಸ್ಯರಿಗೆ ಆದ್ಯತೆ ನೀಡಿ, ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ಅರಸೀಕೆರೆ, ಆಲೂರು, ಹಾಸನ ಮತ್ತು ಹೊಳೆನರಸೀಪುರ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಪಶು ಆಸ್ಪತ್ರೆ ಇವರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಜು.04 ರ ಒಳಗೆ ಅರ್ಜಿಯನ್ನು ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ರವರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನ :
ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಈ ವಿಶೇಷ ಡಿ.ಎಡ್, ಸಾಮಾನ್ಯ ಡಿ.ಎಡ್ ಗೆ ಸಮಾನಾಂತರವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 50% (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45%) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಜು.12 ರ ಒಳಗೆ ವೆಬ್ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿಸಲ್ಲಿಸಬಹುದು. ಈ ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು(ತರಬೇತಿ) ರವರ ಕಚೇರಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ ಪುಲಿಕೇಶಿ ರಸ್ತೆ, ತಿಲಕ್ನಗರ, ಮೈಸೂರು-570001. ದೂರವಾಣಿ ಸಂ:0821- 2491600 ತರಬೇತಿ ಸಂಯೋಜಕರು: ಆಶಾ.ವಿ.ಹಿರೇಮಠ್- 9113561620, ಟಿ.ಡಿ. ಮಂಜುನಾಥ - 9686762378 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa