ಧಾರವಾಡ, 29 ಜೂನ್ (ಹಿ.ಸ.) :
ಆ್ಯಂಕರ್ : ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಜುಲೈ 2ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಜರುಗಲಿದೆ.
ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಸ್ಥಿತರಿರುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಅಧ್ಯಕ್ಷತೆ ವಹಿಸುವರು.
ಶರಣ ಸಾಹಿತಿ ಪ್ರೊ. ಸಿದ್ದಣ್ಣ ಲಂಗೋಟಿ ವಿಶೇಷ ಉಪನ್ಯಾಸ ನೀಡಲಿದ್ದು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa