ಯೋಗ ರತ್ನ : ಐವರು ಯೋಗ ಸಾಧಕರಿಗೆ ಗೌರವ
ಬೆಂಗಳೂರು, 29 ಜೂನ್ (ಹಿ.ಸ.) : ಆ್ಯಂಕರ್ : ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಯೋಗ ರತ್ನ – 2025 ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿದೆ. ಯೋಗ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆಗೈದ ಐವರು ಅಂತರರಾಷ್ಟ್ರೀಯ ಯೋಗಗುರುಗಳ
Yoga ratna


ಬೆಂಗಳೂರು, 29 ಜೂನ್ (ಹಿ.ಸ.) :

ಆ್ಯಂಕರ್ : ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಯೋಗ ರತ್ನ – 2025 ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿದೆ.

ಯೋಗ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆಗೈದ ಐವರು ಅಂತರರಾಷ್ಟ್ರೀಯ ಯೋಗಗುರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜೊತೆಗೆ, ಯೋಗ ಹಾಗೂ ಫಿಟ್‌ನೆಸ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಭಾವ ಬೀರುತ್ತಿರುವ ಇನ್‌ಫ್ಲುಯೆನ್ಸರ್‌ಗಳು ಮತ್ತು ಟಿವಿ ನಿರೂಪಕರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಶ್ವಾಸಗುರು ವಚನಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande