ವಿದ್ಯಾರ್ಥಿವೇತನ ಪಡೆಯಲು ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆ ಅಗತ್ಯ
ಶಿವಮೊಗ್ಗ, 03 ಜೂನ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್ ಟೆಕ್ನಾಲಜಿ
ವಿದ್ಯಾರ್ಥಿವೇತನ ಪಡೆಯಲು ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆ ಅಗತ್ಯ


ಶಿವಮೊಗ್ಗ, 03 ಜೂನ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್ ಟೆಕ್ನಾಲಜಿರವರು ಅಭಿವೃದ್ಧಿ ಪಡಿಸಿರುವ ನ್ಯಾಷನಲ್ ಸ್ಕಾಲರ್‌ಷಿಪ್ ಪೋರ್ಟಲ್‌ನಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆದು, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ https://scholarships.gov.in ರಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆಯುವಂತೆ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ.ವ.ಕ.ಇಲಾಖೆಯ ಕಚೇರಿ ಹಾಗೂ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande