ಹೊಸಪೇಟೆ, 03 ಜೂನ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಕೂಡ್ಲಿಗಿ ಮತ್ತು ಕೊಟ್ಟೂರು ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ವರ್ಗದ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಕೂಡ್ಲಿಗಿ ಮತ್ತು ಕೊಟ್ಟೂರು ತಾಲೂಕಿನ ಬಾಲಕರ ವಸತಿ ನಿಲಯಗಳು ನೂತನ, ವಿಭಜಿತ ಮತ್ತು ಮೂಲ ಕೂಡ್ಲಿಗಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳು, ಕೂಡ್ಲಿಗಿ, ಕೊಟ್ಟೂರು ಮತ್ತು ಹೊಸಹಳ್ಳಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳು ಪ್ರವರ್ಗ-1, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2.50 ಲಕ್ಷ ರೂ, ಪ್ರವರ್ಗ-2, 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ರೂಗಳು ಒಳಗಿರಬೇಕು. https://shp.karnataka.gov.in/bcwd ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಜೂನ್.20 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ http://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಕೂಡ್ಲಿಗಿಯಲ್ಲಿ ಸಂಪರ್ಕಿಸುವುದು. ಸಹಾಯವಾಣಿ ಸಂಖ್ಯೆ 08391-220583, 8050770004 ಮತ್ತು 8050770005 ಸಂಖ್ಯೆಗಳಿಗೆ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್