ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು, 03 ಜೂನ್ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಎಸ್.ಹೆಚ್.ಪಿ ತಂತ್ರಾಂಶದ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ಇಚ್ಛಿಸುವ ಅರ
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ರಾಯಚೂರು, 03 ಜೂನ್ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಎಸ್.ಹೆಚ್.ಪಿ ತಂತ್ರಾಂಶದ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ಇಚ್ಛಿಸುವ ಅರ್ಹವಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನ ಜೂನ್ 30 ಆಗಿರುತ್ತದೆ. ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳ ಪೈಕಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಮೀಸಲು ಸ್ಥಾನಗಳು ಹಾಗೂ ಪರಿಶಿಷ್ಟ ಜಾತಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ಸೇರಿದಂತೆ ಇತರೆ ಸಮುದಾಯಕ್ಕೆ ಶೇ.25 ರಷ್ಟು ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಪ್ರ.ವರ್ಗ-1, ಎಸ್.ಸಿ. ಹಾಗೂ ಎಸ್.ಟಿ. ಸಮುದಾಯಕ್ಕೆ 2.50 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಸಮುದಾಯಕ್ಕೆ 1.00 ಲಕ್ಷ ರೂ. ಆದಾಯ ಮಿತಿ ಹೊಂದಿರಬೇಕು.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ದಾಖಲೆಗಳ ವಿವರಕ್ಕಾಗಿ ವೆಬ್‍ಸೈಟ್ ವಿಳಾಸ : https://shp.karnataka.gov.in. ನಲ್ಲಿ ಜೂನ್ 30ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ದಾಖಲಾತಿಗಳು: ಎಸ್.ಎಸ್.ಪಿ. ವಿದ್ಯಾರ್ಥಿಯ ಐ.ಡಿ ಸಂಖ್ಯೆ ಮತ್ತು ವಿದ್ಯಾರ್ಥಿ ಅಥವಾ ಪಾಲಕರ ಮೊಬೈಲ್ ಸಂಖ್ಯೆ, ಆರ್.ಡಿ. ಸಂಖ್ಯೆ ಹೊಂದಿರುವ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಪ್ರತಿ, ಎಸ್.ಎ.ಟಿ.ಎಸ್. ಸಂಖ್ಯೆ & ಹಿಂದಿನ ಸಾಲಿನಲ್ಲಿ ತೇರ್ಗಡೆಯಾದ ತರಗತಿಯ ಅಂಕಪಟ್ಟಿಯ ಪ್ರತಿ, ಆಧಾರ್ ಕಾರ್ಡನಲ್ಲಿರುವಂತೆ ವಿದ್ಯಾರ್ಥಿಯ ಸಂಪೂರ್ಣ ವಿಳಾಸ, ಆಧಾರ್ ಕಾರ್ಡ ಪ್ರತಿ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಸತಿ ನಿಲಯಕ್ಕೆ ಆಯ್ಕೆ ಬಯಸುವ ವಿದ್ಯಾರ್ಥಿಗಳನ್ನು ಕಳೆದ ಸಾಲಿನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ವಿದ್ಯಾರ್ಥಿಯು ಆಯ್ಕೆಗೆ ಇಚ್ಛಿಸುವ ವಸತಿ ನಿಲಯಕ್ಕೆ ನೀಡಿದ ಆಧ್ಯತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ವಿದ್ಯಾರ್ಥಿಗಳು ಎಲ್ಲಾ ದಾಖಲಾತಿಗಳ ಜೊತೆಗೆ ಆನ್‍ಲೈನ್ ಅರ್ಜಿ ಸಲ್ಲಿಸಿದ ಪ್ರತಿಗೆ ಹಾಲಿ ವ್ಯಾಸಂಗ ಮಾಡುತ್ತಿರುವ ಶಾಲೆಯ ಮುಖ್ಯಸ್ಥರಿಂದ ಧೃಢೀಕರಿಸಿ ಆಯ್ಕೆಯಾದ ವಿದ್ಯಾರ್ಥಿನಿಲಯದ ಮೇಲ್ವಿಚಾರಕರಿಗೆ ತಲುಪಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080532-220045, 9535828236ಗೆ ಅಥವಾ ಆಯಾ ತಾಲೂಕಾ ಕಚೇರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ರಾಜೇಂದ್ರ ಜಲ್ದಾರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande