ರಾಯಚೂರು, 03 ಜೂನ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧೀನದಲ್ಲಿರುವ ಜಿಲ್ಲಾ ಕ್ಷಯರೋಗ ವಿಭಾಗದ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಿಗೆ 2025-26ನೇ ಸಾಲಿಗಾಗಿ 4 ಚಕ್ರದ 1 ಬಾಡಿಗೆ ವಾಹನ ಒದಗಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 17ರ ಸಂಜೆ 5 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್