ಕೋಲಾರ, ೦೩ ಜೂನ್ (ಹಿ.ಸ) :
ಆ್ಯಂಕರ್ : ಡೆಂಗ್ಯು ಹರಡಲು ಕಾರಣವಾದ ಸೊಳ್ಳೆಗಳ ನಿಯಂತ್ರಣ ಅತಿ ಮುಖ್ಯವಾಗಿದ್ದು, ಮನೆ, ಶಾಲೆ ಆವರಣದಲ್ಲಿ ಸ್ವಚ್ಚತೆಗೆ ಒತ್ತು ನೀಡಿ, ಅಗತ್ಯ ಮುನ್ನಚ್ಚರಿಕೆ ವಹಿಸಿ ಎಂದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆರ್. ಸತ್ಯನಾರಾಯಣಗೌಡ ಕರೆ ನೀಡಿದರು.
ಜೂ.೨ ರಿಂದ ೯ ರವರೆಗೂ ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳು, ಅಂಗನವಾಡಿ,ವಸತಿನಿಲಯ, ಸರ್ಕಾರಿಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ಕುರಿತ ಅರಿವು ಸಭೆಗಳ ಭಾಗವಾಗಿ ನಗರದ ಕಾರಂಜಿಕಟ್ಟೆಯ ಸುಭಾಷ್ ವಿದ್ಯಾಸಂಸ್ಥೆಯಲ್ಲಿ ನಡೆದ ಕಾಯಕ್ರಮದಲ್ಲಿ ಮಾತನಾಡಿದರು.
ಈಡೀಸ್ ಈಜಿಪ್ಟಿ ಎಂಬ ಸೊಳ್ಳೆ ಕಡಿತದಿಂದ ಹರಡುತ್ತದೆ. ಸೊಳ್ಳೆಗಳು ಯಾವ ರೀತಿ ಉತ್ಪತ್ತಿಗೆ ಕಾರಣಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಿ ಅವರಲ್ಲಿ ರೋಗ ತಡೆಗಟ್ಟಲು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ಇದೇ ಸಂದರ್ಭದಲ್ಲಿ ಜಾಗೃತಿಮೂಡಿಸುವ ಕರಪತ್ರ ಬಿಡುಗಡೆ ಮಾಡಿದ ಅವರು, ಪ್ರತಿಯೊಬ್ಬರು ಸಹ ತಮ್ಮ ಜವಾಬ್ದಾರಿಯನ್ನು ಅರಿತು ರೋಗದಿಂದ ದೂರವಿರಿ. ಮನೆಯಲ್ಲಿ ಇರುವ ನೀರಿನ ತೊಟ್ಟಿಗಳು, ಡ್ರಂಗಳು ಮತ್ತು ಸಿಂಟೆಕ್ಸ್ಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ಎಸೆದಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು, ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆಯನ್ನು ಬಳಸಬೇಕು ಎಂದರು.
ನಗರ ಮತ್ತು ಗ್ರಾಮೀಣ ಪ್ರದೇಶದ ಕಲ್ಯಾಣಿ,ನೀರಿನ ತಾಣಗಳಲ್ಲಿ ಸೊಳ್ಳೆಗಳ ಸಂತತಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿ, ಜನತೆ ಡೆಂಗ್ಯು ರೋಗ ಲಕ್ಷಣಗಳ ಕುರಿತು ಮಾಹಿತಿ ನೀಡುವ ಕೆಲಸವನ್ನು ಇಲಾಖೆ ಮಾಡುತ್ತಿದೆ ಎಂದರು.
ನಗರಸಭೆ, ಪುರಸಭೆ ಮತ್ತು ಗ್ರಾ.ಪಂಗಳಿAದ ಪ್ರತಿ ಗ್ರಾಮ,ವಾರ್ಡಿನಲ್ಲಿ ವಾರಕ್ಕೊಮ್ಮೆ ಡ್ರೆöÊ ಡೇ ಆಚರಿಸುವ ಮೂಲಕ ಸಮುದಾಯದ ಸಹಭಾಗಿತ್ವದೊಂದಿಗೆ ಡೆಂಗ್ಯು ನಿಯಂತ್ರಿಸಲು ಆರೋಗ್ಯ ಇಲಾಖೆಯೊಂದಿಗೆ ಪಂಚಾಯತ್ ರಾಜ್ ಇಲಾಖೆ, ನಗರಸಭೆ ಸಹಕರಿಸಲು ಕೋರಲಾಗಿದೆ ಎಂದರು.
ಸುಭಾಷ್ ಶಾಲೆ ಮುಖ್ಯಶಿಕ್ಷಕ ವೇಣುಗೋಪಾಲ್ ಮಾತನಾಡಿ, ಮನುಷ್ಯರಿಗೆ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಪತ್ತೆಯಾಗುತ್ತಿದೆ. ಇದರಲ್ಲಿ ಡೆಂಗ್ಯೂ,ಚಿಕನ್ ಗುನ್ಯಾ ಜ್ವರವು ಸಹ ಒಂದಾಗಿದ್ದು, ಇದರ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ರಹಮತ್ ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಪವನ್‌ಕುಮಾರ್, ಆರ್.ಅಶೋಕ್, ಲಕ್ಷಿö್ಮÃಪತಿ, ಶಿಕ್ಷಕರಾದ ಕೃಷ್ಣೇಗೌಡ, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.
ಚಿತ್ರ ; ಕೋಲಾರದ ಕಾರಂಜಿಕಟ್ಟೆಯ ಸುಭಾಷ್ ವಿದ್ಯಾಸಂಸ್ಥೆಯಲ್ಲಿ ನಡೆದ ಡೆಂಗ್ಯು, ಚಿಕಿನ್‌ಗುನ್ಯಾ ಜಾಗೃತಿ ಕಾಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಆರ್.ಸತ್ಯನಾರಾಯಣಗೌಡ ಜಾಗೃತಿ ಕರಪತ್ರ ಬಿಡುಗಡೆ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್