ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಕ್ರಿಕೆಟ್ ಪಂದ್ಯವಾಡುತ್ತಿರುವ ಆರ್‌ಸಿಬಿ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಆರ್‌ಸಿಬಿ ತಂಡದ ಸೋಲು - ಗೆಲುವು, ಏಳು - ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ - ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.
ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ, ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa