ನವದೆಹಲಿ, 03 ಜೂನ್ (ಹಿ.ಸ.) :
ಆ್ಯಂಕರ್ : ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು, ಜೂನ್ 2, 2025ರ ವರೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 4,000 ತಲುಪಿದೆ. ಗುಜರಾತ್ ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ.
ದೆಹಲಿಯಲ್ಲಿ 47 ಹೊಸ ಸೋಂಕುಗಳು ಹಾಗೂ ಒಂದು ಸಾವು ದಾಖಲಾಗಿ, ಕೇರಳ, ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಪ್ರಕರಣಗಳ ಹಾಗೂ ಸಾವಿನ ಸಂಖ್ಯೆ ಯಲ್ಲೂ ಹೆಚ್ಚಳ ಕಂಡು ಬಂದಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಹೆಚ್ಚಿನ ಸೋಂಕುಗಳು ಸೌಮ್ಯ ಲಕ್ಷಣಗಳೊಂದಿಗೆ ಇರುತ್ತವೆಯಾದರೂ, ತೀವ್ರತೆ ಹೆಚ್ಚಾದರೆ ಆಸ್ಪತ್ರೆಗಳಲ್ಲಿ ಸಿದ್ಧತೆ ಇರಬೇಕೆಂದು ಸೂಚನೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa