ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸುಗಳಿಗೆ ಆಫ್‌ಲೈನ್ ಪ್ರವೇಶ
ರಾಯಚೂರು, 03 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ರಾಯಚೂರಿನ ಸರ್ಕಾರಿ ಪಾಲಿಟೆಕ್ನಿಕ್‌ದಲ್ಲಿ ಎರಡು ವರ್ಷಗಳ ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ, ದ್ವಿತೀಯ ಪಿ.ಯು.ಸಿ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌
ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸುಗಳಿಗೆ ಆಫ್‌ಲೈನ್ ಪ್ರವೇಶ


ರಾಯಚೂರು, 03 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ರಾಯಚೂರಿನ ಸರ್ಕಾರಿ ಪಾಲಿಟೆಕ್ನಿಕ್‌ದಲ್ಲಿ ಎರಡು ವರ್ಷಗಳ ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ, ದ್ವಿತೀಯ ಪಿ.ಯು.ಸಿ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಾತಿ ಇಚ್ಚಿಸುವ ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧೀಕೃತ ವೆಬ್‌ಸೈಟ್ : dtek.karnataka.gov.in or dtetech.karnataka.gov.in/kartechnical ನಲ್ಲಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಜೂನ್ 14ರೊಳಗೆ ಪಾಲಿಟೆಕ್ನಿಕ್ ಪ್ರಾಚಾರ್ಯರಿಗೆ ವಿದ್ಯಾರ್ಹತೆಯ ದಾಖಲೆಗಳೊಂದಿಗೆ ಸಲ್ಲಿಸತಕ್ಕದ್ದು.

ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯ ಪ್ರಕಟಣೆಯನ್ನು ಜೂನ್ 16 ರಂದು ಮತ್ತು ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮೂಲ ದಾಖಲೆಗಳು ಹಾಗೂ ನಿಗದಿತ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂನ್ 17 ರಿಂದ ಜೂನ್ 18ರವರೆಗೆ ಕಾಲಾವಕಾಶ ಕಲ್ಪಿಸಲಾಗಿದ್ದು, ಸೀಟುಗಳು ಭರ್ತಿಯಾಗದೇ ಉಳಿಕೆಯಾದಲ್ಲಿ, ಪ್ರಾಂಶುಪಾಲರ ಹಂತದಲ್ಲಿಯೇ ಆಫ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡಲು ಜೂನ್ 19 ರಿಂದ ಜೂನ್ 25ರವರೆಗೆ ಕಾಯ್ದಿರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಸಂಸ್ಥೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ತಿಳಿಸಿಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande