ಭೋಪಾಲ್, 03 ಜೂನ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಧ್ಯಪ್ರದೇಶದ ಭೋಪಾಲ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪಕ್ಷದ ನವ ಸರ್ಜನ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಗುಜರಾತ್ ಬಳಿಕ ಮಧ್ಯಪ್ರದೇಶದಲ್ಲೂ ಸಂಘಟನೆ ಪುನರ್ ನಿರ್ಮಾಣ ಉದ್ದೇಶಿಸಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ರಾಜ್ಯದ ಸಂಘಟನಾತ್ಮಕ ಪುನರ್ ರಚನೆಗಾಗಿ 61 ವೀಕ್ಷಕರನ್ನು ನೇಮಿಸಿದೆ. ಭೋಪಾಲ್‌ನಲ್ಲಿ ವಿವಿಧ ಸಭೆಗಳು ನಡೆಯಲಿದ್ದು, ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ನಾಯಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa