ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್‌ನ ರಾಷ್ಟ್ರೀಯ ಮಾಧ್ಯಮ ಸಮಿತಿಯ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಈ ನೇಮಕಾತಿಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಶ್ವರ್ಯಾ ಅವರು ಮಾಜಿ ಕಾಂಗ್ರೆಸ್ ಶಾಸಕ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿಯಾಗಿದ್ದು, ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರೆಯಾಗಿ ಸೇವೆ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa