ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ರಾಯಚೂರು, 30 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಸಾಲ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ
ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ರಾಯಚೂರು, 30 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಸಾಲ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಸಂಬಂಧಪಟ್ಟ ಯೋಜನೆ ಸೌಲಭ್ಯ ಪಡೆಯಲು ಅರ್ಹ ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ, ವೈಶ್ಯ ಸಮುದಾಯಕ್ಕೆ ಸೇರಿರಬೇಕು, “ನಮೂನೆ–ಜೆ” ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗೇ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಈ ಯೋಜನೆಯಲ್ಲಿ ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ (ವರ್ಗ) ಶೇ.5% ಮೀಸಲಾತಿಯನ್ನು ನೀಡಲಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹಗಿರುತ್ತಾರೆ, ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಸಾಲ ಸೌಲಭ್ಯ ಪಡೆಯಲು ಅವಕಾವಿರುತ್ತದೆ.

ಅರ್ಜಿಯನ್ನು ಅನ್ ಲೈನ್ ಮೂಲಕ http://kacdc.karnataka.gov.in./ ಅಧಿಕೃತ ಜಾಲತಾಣದಲ್ಲಿ ಜುಲೈ 31 ರೊಳಗೆ ಸಲ್ಲಿಸಿ, ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 9448451111ಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande