ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚ್ಯವಾಗಿ ಹೇಳಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂದು ಯಾರೂ ಹೇಳಲು ಆಗುವುದಿಲ್ಲ. ಈ ಕುರಿತಾಗಿ ಯಾರೂ ಅನಗತ್ಯ ಗೊಂದಲ ಉಂಟುಮಾಡಬಾರದು ಎಂದು ತಿಳಿಸಿದರು.
ಸರಕಾರದ ವಿರುದ್ದ ಶಾಸಕರ ಅಸಮಾಧಾನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಸುರ್ಜೇವಾಲ ರಾಜ್ಯಕ್ಕೆ ಬಂದಿದ್ದಾರೆ, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡಲಿದ್ದು ನಂತರ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa