ಬಳ್ಳಾರಿ, 30 ಜೂನ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರದ ಕೋರ್ಸುಗಳಿಗೆ ಅಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ಜುಲೈ 10ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸುಲು ಮನವಿ ಮಾಡಿಕೊಂಡಿರುತ್ತಾರೆ. ಹಾಗೂ ಮಾನ್ಯ ಹೈಕೋರ್ಟ್ ಮಧ್ಯಂತರ ಆದೇಶದಂತೆ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜು.10ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಆನ್ಲೈನ್ ಮೂಲಕ ವೆಬ್ಸೈಟ್ ವಿಳಾಸ: https://ssp.postmatric.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ.
ಕಾರ್ಯಕ್ರಮಗಳ ವಿವರ, ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ವೆಬ್ಸೈಟ್ವಿಳಾಸ: https://bcwd.karnataka.gov.in ಭೇಟಿ ನೀಡಬಹುದಾಗಿದೆ.
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 1902, ಇಮೇಲ್: bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ಅಥವಾ ದೂರವಾಣಿ ಸಂಖ್ಯೆ: 8050770005ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್