ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ, ಪವರ್ ಶೇರ್ ಗೊಂದಲ ಮತ್ತು 'ಸೆಪ್ಟೆಂಬರ್ ಕ್ರಾಂತಿ' ಚರ್ಚೆಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿದ್ದು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸಿದ್ದು ಶಾಸಕರ ಜೊತೆ ಸಭೆ ನಡೆಸಲಿದ್ದಾರೆ.
ಇದಕ್ಕೂ ಮೊದಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಖಾಸಗಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa