ಗದಗ, 30 ಜೂನ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗದಗ ಇವರುಗಳ ಸಹಯೋಗದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ನಿಮಿತ್ಯ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಜುಲೈ 2 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಎಡೆಯೂರು ಶ್ರೀ ಜಗದ್ಗುರು ತೊಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಬಿ.ಬಿ.ಅಸೂಟಿ ಅವರುಗಳು ಆಗಮಿಸುವರು.
ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Lalita MP